Home Karnataka Tumakuru Siddhartha Smiles ಚಿಕಿತ್ಸಾ ಘಟಕಕ್ಕೆ ಚಾಲನೆ

Siddhartha Smiles ಚಿಕಿತ್ಸಾ ಘಟಕಕ್ಕೆ ಚಾಲನೆ

0
Tumkur Siddhartha Dental College Siddhartha Smiles Clinic

Tumkur, Tumakuru : ತುಮಕೂರು ನಗರದ ಅಗಳಕೋಟೆಯ ಸಿದ್ಧಾರ್ಥ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (Siddhartha Dental College & Hospital) ಬುಧವಾರ ‘ಸಿದ್ಧಾರ್ಥ ಸ್ಮೈಲ್ಸ್’ (Siddhartha Smiles) ಚಿಕಿತ್ಸಾ ಘಟಕಕ್ಕೆ ಚಾಲನೆ ದೊರೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ ” ದೇಶದಲ್ಲಿ ಸುಮಾರು 312 ದಂತ ವೈದ್ಯಕೀಯ ಕಾಲೇಜುಗಳಿದ್ದು, ಪ್ರತಿ ವರ್ಷ 25 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪೂರ್ಣಗೊಳಿಸುತ್ತಿದ್ದಾರೆ. ಆದರೆ, ಅವರಿಗೆ ಉತ್ತಮವಾದ ಕೆಲಸ ಸಿಗುತ್ತಿಲ್ಲ. ದಂತ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಅಖಿಲ ಭಾರತ ದಂತ ವೈದ್ಯಕೀಯ ಪರಿಷತ್ತಿನಿಂದ ಹೊಸ ಕಾರ್ಯ ಯೋಜನೆ ಜಾರಿಗೆ ತರಬೇಕು” ಎಂದು ಹೇಳಿದರು.

ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಸದಸ್ಯ ಶಿವಶರಣ ಶೆಟ್ಟಿ, ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಕನ್ನಿಕಾ ಪರಮೇಶ್ವರ, ಡಾ.ಆನಂದ, ‘ಸಾಹೇ’ ವಿಶ್ವವಿದ್ಯಾಲಯ ಉಪಕುಲಪತಿ ಪಿ.ಬಾಲಕೃಷ್ಣ ಶೆಟ್ಟಿ, ಪ್ರಾಂಶುಪಾಲ ಪ್ರವೀಣ್‌ ಕುಡುವ ಮತ್ತಿತರರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version