Home Karnataka Tumakuru TUMUL ವತಿಯಿಂದ ಆರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ

TUMUL ವತಿಯಿಂದ ಆರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ

Tumkuru TUMUL Milk Federation Cheque Distribution

Madhugiri, Tumakuru (Tumkur) : ಮಧುಗಿರಿ ಪಟ್ಟಣದ ತುಮುಲ್ (TUMUL) ಕಚೇರಿ ಆವರಣದಲ್ಲಿ ತುಮುಲ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರಿಗೆ ಅಭಿನಂದನೆ ಹಾಗೂ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಚೆಕ್ ಗಳನ್ನು ವಿತರಿಸಿದರು.

ವಿವಿಧ ಯೋಜನೆಗಳಡಿಯಲ್ಲಿ ತುಮುಲ್ ವತಿಯಿಂದ ₹61 ಲಕ್ಷ 5 ಸಾವಿರ ಚೆಕ್ ಆರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತಿದ್ದು ಸುಮಾರು ₹19 ಕೋಟಿ ಹಣ ವಾರಕ್ಕೊಮ್ಮೆ ಹಾಲು ಉತ್ಪಾದಕರಿಗೆ ನೇರವಾಗಿ ಅವರ ಖಾತೆಗಳಿಗೆ ಪಾವತಿಸಲಾಗುತ್ತಿದೆ ಎಂದು ತುಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಕೊಂಡವಾಡಿ, ಚಂದ್ರಶೇಖರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಮಹಾಮಂಡಲದ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, DCC ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ ರಾಜಣ್ಣ, ತುಮುಲ್ ನಿರ್ದೇಶಕ ಚೆನ್ನಮಲ್ಲಪ್ಪ, PLD ಬ್ಯಾಂಕ್ ಅಧ್ಯಕ್ಷ ಕೆಂಚಣ್ಣ, Congress ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ ರಾಜಗೋಪಾಲ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಪ್ರಕಾಶ್, ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ಎಂ. ವಿ.ಮಂಜುನಾಥ್ , ವಕೀಲರ ಸಂಘದ ಅಧ್ಯಕ್ಷ ಪಿ.ಸಿ.ಕೃಷ್ಣಾರೆಡ್ಡಿ, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಪಿ.ಟಿ.ಗೋವಿಂದಪ್ಪ, ತುಮುಲ್ ವಿಸ್ತರಣಾಧಿಕಾರಿಗಳಾದ ಗಿರೀಶ್ , ಶಂಕರನಾಗ್ , ಧರ್ಮವೀರ ಮತ್ತಿತ್ತರು ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version