back to top
21.7 C
Bengaluru
Monday, October 27, 2025
HomeKarnatakaUdupiಕೃಷ್ಣ ಮಠದ ಪರ್ಯಾಯ ಮಹೋತ್ಸವ ಪೂರ್ವಭಾವಿ ಸಭೆ

ಕೃಷ್ಣ ಮಠದ ಪರ್ಯಾಯ ಮಹೋತ್ಸವ ಪೂರ್ವಭಾವಿ ಸಭೆ

- Advertisement -
- Advertisement -

Udupi : ಉಡುಪಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಕೃಷ್ಣ ಮಠದ (Shri Krishna Matha) ಪರ್ಯಾಯ ಮಹೋತ್ಸವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಹಿಸಿಕೊಂಡಿದ್ದರು.

ಬಳಿಕ ಮಾತನಾಡಿದ ಸಚಿವರು “ಕೃಷ್ಣಮಠದ ಪರ್ಯಾಯೋತ್ಸವಕ್ಕೆ ರಾಜ್ಯ ಹಾಗು ಹೊರ ರಾಜ್ಯಗಳಿಂದ ಭಕ್ತರು ಆಗಮಿಸಲಿದ್ದು ಭಕ್ತರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ನಗರಸಭೆಯವರು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು, ಜನವರಿ 10ರೊಳಗೆ ರಸ್ತೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿ ಸುಗಮ ಸಂಚಾರ, ವಾಹನ ನಿಲುಗಡೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸಾರಿಗೆ ವಾಹನಗಳ ವ್ಯವಸ್ಥೆ ಭಕ್ತರ ಸಂಚಾರಕ್ಕೆ ಮಾಡಬೇಕು. ಆಂಬುಲೆನ್ಸ್‌ಗಳ ನಿರ್ವಹಣೆಯ ಜವಾಬ್ದಾರಿ ಸಹಕಾರಿ ಸಂಘಗಳು ವಹಿಸಬೇಕು. 14 ವರ್ಷ ಮೇಲ್ಪಟ್ಟವರಿಗೆ ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಲಸಿಕೆ ಪಡೆದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು” ಎಂದು ತಿಳಿಸಿದರು.

ಉಡುಪಿ ಶಾಸಕ ಹಾಗೂ ಪರ್ಯಾಯ ಸಮಿತಿ ಗೌರವಾಧ್ಯಕ್ಷ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್ ಸಭೆಯಲ್ಲಿ ಭಾಗವಹಿಸಿದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page