Search
WhatsApp alerts

Home › India

ಆಂಧ್ರದ LEAP Project ಗೆ ಕೇಂದ್ರ ಶಿಕ್ಷಣ ಸಚಿವರಿಂದ ಮೆಚ್ಚುಗೆ

administrator · Published

Union Education Minister Dharmendra Pradhan

Amravati: ಆಂಧ್ರ ಪ್ರದೇಶ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ qualitative ಬದಲಾವಣೆಗಾಗಿ ಆರಂಭಿಸಿರುವ LEAP ಯೋಜನೆಗೆ (LEAP project) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆಂಧ್ರ ಸರ್ಕಾರದ ಸಚಿವ ನಾರಾ ಲೋಕೇಶ್, ಕೇಂದ್ರ ಶಿಕ್ಷಣ ಸಚಿವರನ್ನು ಭೇಟಿಯಾಗಿ LEAP (Learning, Equity, Access Program) ಯೋಜನೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಈ ಯೋಜನೆಯು ರಾಷ್ಟ್ರೀಯ ಶಿಕ್ಷಣ ನೀತಿ – 2020 ಪ್ರಕಾರ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನ್ ಹೇಳಿದ್ದಾರೆ.

LEAP ಯೋಜನೆಯು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನೀಡಲು, ಶಾಲೆಗಳ ಗುಣಮಟ್ಟ ಸುಧಾರಿಸಲು ಮತ್ತು ಭವಿಷ್ಯಕ್ಕಾಗಿ ಮಕ್ಕಳನ್ನು ಸಿದ್ಧಪಡಿಸಲು ರೂಪುಗೊಂಡಿದೆ. ಇದರಲ್ಲಿ AI ಆಧಾರಿತ ಮೌಲ್ಯಮಾಪನ, ಆಟ ಆಧಾರಿತ ಕಲಿಕೆ, ಮತ್ತು ಶಿಕ್ಷಕರ ತರಬೇತಿ ಪ್ರಮುಖ ಅಂಶಗಳಾಗಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಂಧ್ರದಲ್ಲಿ ಬಲವಾದ ಶಿಕ್ಷಣ ವ್ಯವಸ್ಥೆ ನಿರ್ಮಿಸಲು ಸಹಕಾರ ನೀಡುತ್ತದೆ ಎಂಬ ಭರವಸೆಯನ್ನೂ ಪ್ರಧಾನ್ ನೀಡಿದ್ದಾರೆ.

ಈ ವರ್ಷದಿಂದಲೇ ಲೀಪ್ ಯೋಜನೆ ಆರಂಭವಾಗಲಿದೆ. 2029ರ ಅಂತ್ಯದೊಳಗೆ ವಿಶ್ವಮಟ್ಟದ ಶಿಕ್ಷಣ ವ್ಯವಸ್ಥೆ ನಿರ್ಮಿಸುವ ಗುರಿಯಿದೆ ಎಂದು ರಾಜ್ಯದ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಈ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಾಣ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನೂ ಸುಧಾರಿಸಲಾಗುತ್ತದೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page