
United Nations: ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯಲ್ಲಿ(General Assembly) ಭಾರತವು (India) ಪಾಕಿಸ್ತಾನವನ್ನು (Pakistan) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ವಿಶ್ವದಾದ್ಯಂತ ಭಯೋತ್ಪಾದಕ ಘಟನೆಗಳ ಮೇಲೆ ಪಾಕ್ ಕರಿನೆರಳು ಇದೆ ಎಂದು ಆರೋಪಿಸಿದೆ.
ವಿಶ್ವಸಂಸ್ಥೆಯ(UN) ಸಾಮಾನ್ಯ ಸಭೆಯ ಅಧಿವೇಶನದ ಸಾಮಾನ್ಯ ಚರ್ಚೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ (PM Shehbaz Sharif) ಅವರು ಜಮು ಮತ್ತು ಕಾಶೀರದ (Jammu and Kashmir) ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಭಾರತವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ಆರೋಪ ಮಾಡಿದೆ.
ಶುಕ್ರವಾರ ನಡೆದ ವಿಶ್ವಸಂಸ್ಥೆ (United Nations) ಸಾಮಾನ್ಯ ಸಭೆಯ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದ ಕಾಕರ್, ‘ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಕಾಶ್ಮೀರ (peace between India and Pakistan) ವಿಷಯವೇ ನಿರ್ಣಾಯಕವಾದುದು” ಎಂದು ಪ್ರತಿಪಾದಿಸಿದರು.
ಇದಕ್ಕೆ ವಿಶ್ವಸಂಸ್ಥೆಯಲ್ಲಿನ ಭಾರತದ ಕಾರ್ಯದರ್ಶಿ ಪೆಟಲ್ ಗೆಹಲೋತ್ (Petal Gehlot) ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನ ಈ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಭಾರತದ ವಿರುದ್ಧ ಆಧಾರ ರಹಿತ ಮತ್ತು ದುರುದ್ದೇಶಪೂರಿತ ಪ್ರಚಾರ ಮಾಡುವ ತನ್ನ ಹಳೆಯ ಚಾಳಿ ಮುಂದುವರಿಸಿದೆ” ಎಂದರು.
ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ (Jammu and Kashmir) ಹಾಗೂ ಲಡಾಖ್ (Ladakh) ಭಾರತದ ಅವಿಭಾಜ್ಯ ಅಂಗ. ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ಗೆ ಸಂಬಂಧಿಸಿದ ವಿಚಾರಗಳು ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರಗಳು. ನಮ್ಮ ದೇಶೀಯ ವಿಚಾರದ ಬಗ್ಗೆ ಹೇಳಿಕೆ ನೀಡಲು ಪಾಕಿಸ್ತಾನಕ್ಕೆ ಯಾವುದೇ ಅಧಿಕಾರವಿಲ್ಲ’ ಎಂದು ಗೆಹಲೋತ್ ಪ್ರತಿಪಾದಿಸಿದರು.
ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ ಪ್ರಕಟಿಸಿದ ಇತ್ತೀಚಿನ ವರದಿಯ ಪ್ರಕಾರ, ಪ್ರತಿ ವರ್ಷ ದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಂದಾಜು ಸಾವಿರ ಮಹಿಳೆಯರು ಅಪಹರಣ, ಬಲವಂತದ ಮತಾಂತರ ಮತ್ತು ಮದುವೆಗೆ ಒಳಗಾಗುತ್ತಿದ್ದಾರೆ ಎಂದು ಗೆಹಲೋತ್ ವಿವರಿಸಿದರು.