back to top
25.7 C
Bengaluru
Saturday, July 19, 2025
HomeEnvironment"ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – 8 ಮಂದಿ ಬಲಿ, ಮನೆಗಳು ಜಲಾವೃತ"

“ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – 8 ಮಂದಿ ಬಲಿ, ಮನೆಗಳು ಜಲಾವೃತ”

- Advertisement -
- Advertisement -

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Rain) ಸುರಿಯಿತು. ಮಳೆಯಿಂದಾಗಿ ಒಂದೇ ದಿನದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಮಾತ್ರವೇ 25ಕ್ಕೂ ಹೆಚ್ಚು ಮರಗಳು ಧರೆಗೆ ಬಿದ್ದಿವೆ. ಗದಗದಲ್ಲಿ ಬೈಕ್ ಸವಾರನೊಬ್ಬ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಗೋಕಾಕ್ ನಲ್ಲಿ ಮತ್ತೊಬ್ಬ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋದಿದ್ದಾನೆ. ಕೊಪ್ಪಳದಲ್ಲಿ ಇಬ್ಬರು, ಬಳ್ಳಾರಿಯಲ್ಲಿ ಇಬ್ಬರು, ಚಿಕ್ಕಮಗಳೂರು ಹಾಗೂ ವಿಜಯಪುರದಲ್ಲಿ ತಲಾ ಒಬ್ಬ ವ್ಯಕ್ತಿ ಸಿಡಿಲಿಗೆ ಬಲಿಯಾಗಿದ್ದಾರೆ.

ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಹಲವಾರು ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನಗರದ ಉತ್ತರ ಹಾಗೂ ಪೂರ್ವ ಭಾಗಗಳಲ್ಲಿ ಹೆಚ್ಚು ಮಳೆಯಾಗಿದೆ. ಸುಮಾರು 25ಕ್ಕೂ ಹೆಚ್ಚು ಮರಗಳು ಬಿದ್ದಿವೆ.

ಹುಬ್ಬಳ್ಳಿಯ ಗಣೇಶಪೇಟೆ, ಆನಂದ್ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದೆ. ಜನರು ನೀರನ್ನು ಹೊರತೆಗೆದು ವಸ್ತುಗಳನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿದ್ದಾರೆ.

ನಾಲೆಗಳನ್ನು ನಿರ್ವಹಣೆ ಮಾಡದ ಕಾರಣವನ್ನಾಗಿ ಜನತೆ ನಗರದ ಮಹಾನಗರ ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡದ ಮನಸೂರು ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ನಿಂತ ಪರಿಣಾಮ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಟ್ರಾಫಿಕ್ ಜಾಮ್ ಉಂಟಾಗಿದೆ.

ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆ ಸುರಿಯಿದ್ದು, ಚಿಂಚೋಳಿ ತಾಲೂಕಿನ ಸುಲೇಪೇಟ ಮತ್ತು ಬೆನಕನಹಳ್ಳಿ ಗ್ರಾಮಗಳಲ್ಲಿ ಮನೆಗಳಿಗೆ ನುಗ್ಗಿದ ನೀರು ಜನರನ್ನು ಸಂಕಷ್ಟಕ್ಕೆ ತಂದಿದೆ. ಹಲವಾರು ಮನೆಗಳಲ್ಲಿ ಸಂಗ್ರಹಿಸಿದ್ದ ಧಾನ್ಯಗಳು ನೀರು ಪಾಲಾಗಿವೆ.

ರಾಜ್ಯದ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ರಸ್ತೆಗಳು ಜಲಾವೃತ, ಮನೆಗಳಿಗೆ ನೀರು ನುಗ್ಗಿದ ಘಟನೆಗಳು, ಸಿಡಿಲಿಗೆ ಬಲಿಯಾದವರು, ಕೊಚ್ಚಿ ಹೋಗಿರುವವರು ಮುಂತಾದ ಘಟನೆಗಳು ಈ ಬಾರಿ ಮಳೆ ಕಳೆಗಟ್ಟಿದ ಪರಿಣಾಮಗಳನ್ನು ಸ್ಪಷ್ಟವಾಗಿ ತೋರಿಸುತ್ತಿವೆ.

For Daily Updates WhatsApp ‘HI’ to 7406303366


- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page