Anand, Gujarat : ಪ್ರಧಾನಿ ನರೇಂದ್ರ ಮೋದಿಯವರು (Narendra Modi) Mysuru-Bengaluru-Chennai ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express Train) ರೈಲಿಗೆ ಚಾಲನೆ ನೀಡಲು ಕೆಲವೇ ದಿನಗಳು ಉಳಿದಿರುವಾಗ. ಗುಜರಾತ್‌ನ ಆನಂದ್ ಬಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೆ ಈಡಾಗಿರುವುದು ವರದಿಯಾಗಿದೆ.
ಗುಜರಾತ್‌ನ ಆನಂದ್ ಬಳಿ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 4.37ಕ್ಕೆ ಈ ಅಪಘಾತ ನಡೆದಿದ್ದು, ಆನಂದ್ ರೈಲ್ವೇ ನಿಲ್ದಾಣದ ಬಳಿ ಹಳಿ ದಾಟುತ್ತಿದ್ದ ಬಿಯಾಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ರೈಲು ಗಾಂಧಿನಗರ ರಾಜಧಾನಿಯಿಂದ ಮುಂಬೈ ಸೆಂಟ್ರಲ್‌ಗೆ ತೆರಳುತ್ತಿತ್ತೆಂದು ತಿಳಿದುಬಂದಿದೆ.
ಅಪಘಾತದ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ರೈಲಿನ ಉದ್ಘಾಟನೆ ಮಾಡಿದ್ದರು.
ಈ ಹಿಂದೆ ಹೊಚ್ಚ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳಿಗೆ ಡಿಕ್ಕಿಯಾಗಿ ಸುದ್ದಿ ಮಾಡಿತ್ತು. ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ರೈಲಿಗೆ ಸಿಲುಕಿ ದನಕರುಗಳು ಹಳಿಯಲ್ಲಿ ಸಾವನ್ನಪ್ಪಿರುವ ಘಟನೆಗಳು ವರದಿಯಾಗಿವೆ. ಇದೀಗ ಗುಜರಾತ್ನಲ್ಲಿ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು 54 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇದೆ ತಿಂಗಳು November 11 ರಂದು ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಯವರು ಚಾಲನೆ ನೀಡಲಿದ್ದಾರೆ.