ಗುಜರಾತ್‌ನ ಜಾಮ್ ನಗರದಲ್ಲಿರುವ ರಿಲಯನ್ಸ್ ಫೌಂಡೇಶನ್ (Reliance Foundation) ವಂತಾರಾಕ್ಕೆ (Vantara) ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಭೇಟಿ ನೀಡಿ, ವನ್ಯಜೀವಿ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಂತಾರಾದ (Vantara) ಸೌಲಭ್ಯಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಅನಂತ್ ಅಂಬಾನಿಯವರ ಈ ಮಹತ್ವಾಕಾಂಕ್ಷಿ ಯೋಜನೆಗೆ ಭಾರತ ಸರ್ಕಾರವು ‘ಪ್ರಾಣಿ ಮಿತ್ರ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದು ಪ್ರಾಣಿಗಳ ಕಲ್ಯಾಣಕ್ಕಾಗಿ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯಾಗಿದೆ.
ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಮತ್ತು ಅನಂತ್ ಅಂಬಾನಿ, ಪ್ರಕೃತಿಯನ್ನು ಪೋಷಿಸುವ ಮಹತ್ವದ ಕುರಿತು ತಮ್ಮ ಕಾಳಜಿಯನ್ನು ಹಂಚಿಕೊಂಡು, ವಂತರಾ ಸ್ಥಾಪನೆಯ ಹಿನ್ನಲೆಯಲ್ಲಿ ಬರುವ ಉದ್ದೇಶವನ್ನು ವಿವರಿಸಿದರು.