Vijayapura : ವಿಜಯಪುರ ಪುರಸಭೆಯಲ್ಲಿ (TMC – Town Municipal council) ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ (Pourakarmikas) ನಿವೇಶನ (Site / Plot) ಹಂಚಿಕೆ ಮಾಡಬೇಕೆಂದು ಮನವಿ ಸಲ್ಲಿಸಿದರೂ ನಿವೇಶನ ಮಂಜೂರು ಮಾಡಿಲ್ಲ ಎಂದು ಪೌರಕಾರ್ಮಿಕರು ಜಿಲ್ಲಾಧಿಕಾರಿ (Deputy Commissioner) ಕೆ.ಶ್ರೀನಿವಾಸ್ ಅವರಿಗೆ ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯದ ಆವರಣದಲ್ಲಿ ಶುಕ್ರವಾರ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಎಷ್ಟು ಮಂದಿ ಪೌರಕಾರ್ಮಿಕರಿದ್ದಾರೆ ಎನ್ನುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ನಿವೇಶನ ಮಂಜೂರು ಮಾಡಿಕೊಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ ಪೌರಕಾರ್ಮಿಕರ ನಿವೇಶನಗಳಿಗೆ ಸಂಬಂಧಪಟ್ಟಂತೆ ಭೂಮಿ ಮಂಜೂರು ಮಾಡಲು ಮಂಡಿಸಿರುವ ಕಡತ ಏನಾಗಿದೆ ಎನ್ನುವ ಕುರಿತು ಪರಿಶೀಲನೆ ಮಾಡಿ, ಭೂಮಿ ಮಂಜೂರು ಮಾಡಿಕೊಡುವಂತೆ ತಹಶೀಲ್ದಾರ್ ಶಿವರಾಜ್ ಅವರಿಗೆ ಸೂಚಿಸಿದರು