Tuesday, October 4, 2022
HomeKarnatakaVijayapuraಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

Vijayapura : ವಿಜಯಪುರ ನಗರ ಹಾಗೂ ನಾಗಠಾಣ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ (Deputy Commissioner P. Sunil Kumar) ಭಾನುವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಪ್ರಗತಿ ಕಾಲೊನಿ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹ 1.5 ಕೋಟಿ ಅನುದಾನದಲ್ಲಿ ಆಹೇರಿ ತಾಂಡಾದಲ್ಲಿ ಕೈಗೊಳ್ಳಲಾಗುತ್ತಿರುವ ಸಿಸಿ ರಸ್ತೆ ಮತ್ತು ಸಮುದಾಯ ಭವನ ಕಾಮಗಾರಿ, ಕನ್ನಾಳ ಗ್ರಾಮದಲ್ಲಿ ₹ 10 ಲಕ್ಷ ಅನುದಾನದಲ್ಲಿ ನಡೆಯುತ್ತಿರುವ ಡಾ.ಬಿ.ಆರ್ಂಬೇಡ್ಕರ್ ಭವನ ಕಾಮಗಾರಿ ಹಾಗೂ ₹ 2.90 ಲಕ್ಷ ಅನುದಾನದಲ್ಲಿ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಕೈಗೊಳ್ಳಲಾಗುತ್ತಿರುವ ಗಾಂಧಿ ಭವನ ಕಾಮಗಾರಿ, ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿ ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ಎನ್.ಮಲಜಿ, ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಎಂಜಿನಿಯರ್, ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಬಸವರಾಜ ನಾಟಿಕಾರ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page