Home Devanahalli Vijayapura | Devanahalli ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಸಾಧನೆ

Devanahalli Vijayapura Pragathi Composite PU College District Level Competition

Vijayapura, Devanahalli : ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ (Sri.Kongadiyappa College) ಆಯೋಜಿಸಲಾದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜಯಪುರ ಪಟ್ಟಣದ ಪ್ರಗತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ (Pragathi Composite PU College) ವಿದ್ಯಾರ್ಥಿಗಳು ಪ್ರಾಬಲ್ಯ ಪ್ರದರ್ಶಿಸಿ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ನಂದಿತಾ ಮತ್ತು ಆರ್. ಜೀವಿತಾ ಪ್ರಥಮ ಸ್ಥಾನ ಪಡೆದು ಮೆರೆಯಿದರು. ದೀಕ್ಷಿತಾ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಮಮ್ತಾಜ್ ಮತ್ತು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಎಂ. ಸಪ್ತಮಿ ದ್ವಿತೀಯ ಸ್ಥಾನದಲ್ಲಿ ಮುನ್ನಡೆ ಸಾಧಿಸಿದರು.

ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಂ. ಸತೀಶ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್. ಕೃಪಾಶಂಕರ್ ಮತ್ತು ಪ್ರಾಂಶುಪಾಲ ಸುರೇಶ್ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version