back to top
21.7 C
Bengaluru
Wednesday, September 17, 2025
HomeKarnatakaರೈತ ಮತ್ತು ಜನ ವಿರೋಧಿ ಸರ್ಕಾರವನ್ನು ಕಿತ್ತು ಹಾಕೋಣ- Vijayendra

ರೈತ ಮತ್ತು ಜನ ವಿರೋಧಿ ಸರ್ಕಾರವನ್ನು ಕಿತ್ತು ಹಾಕೋಣ- Vijayendra

- Advertisement -
- Advertisement -

Bidar: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 50ಕ್ಕೂ ಹೆಚ್ಚು ಅವಶ್ಯಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನತೆಗೆ ತೀವ್ರ ನಷ್ಟವಾಗಿದೆ. ಭ್ರಷ್ಟಾಚಾರಕ್ಕೆ ಹೊತ್ತಿರುವ, ರೈತ ಹಾಗೂ ಜನರ ವಿರೋಧಿ (anti-farmer and anti-people) ಈ ಸರ್ಕಾರವನ್ನು ಬುಡಮೂಲದಿಂದ ಕಿತ್ತು ಹಾಕಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (Vijayendra ) ಹೇಳಿದರು.

ಶುಕ್ರವಾರ ಬೀದರ್‌ನಲ್ಲಿ ನಡೆದ “ಜನಾಕ್ರೋಶ ಯಾತ್ರೆ”ಯಲ್ಲಿ ಅವರು ಮಾತನಾಡಿದರು. “ಮುಸ್ಲಿಂ ವಿರೋಧಿ ಪಕ್ಷ ಅಲ್ಲ ಬಜೆಪಿ. ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಹಿಳೆಯರ ಹಿತಚಿಂತಕರಾಗಿ ತ್ರಿವಳಿ ತಲಾಖ್ ರದ್ದುಗೊಳಿಸಿದ್ದಾರೆ. ಆದರೆ, ಕೆಲವರು ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗುತ್ತಿರುವುದು ಖಂಡನೀಯ. ದಲಿತ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿದ ದೇಶದ್ರೋಹಿಗಳನ್ನು ಬಂಧಿಸಬೇಕಿತ್ತು. ಆದರೆ ಅವರನ್ನು ರಕ್ಷಿಸಲಾಗುತ್ತಿದೆ,” ಎಂದು ವಿಜಯೇಂದ್ರ ಕಿಡಿಕಾರಿದರು.

ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಸಕರು ಪ್ರಭು ಚವ್ಹಾಣ್, ಶರಣು ಸಲಗರ, ಡಾ. ಸಿದ್ದಲಿಂಗಪ್ಪ ಪಾಟೀಲ್, ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಶಶೀಲ್ ಜಿ. ನಮೋಶಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಎಂಎಲ್ಸಿ ರಘುನಾಥರಾವ್ ಮಲ್ಕಾಪುರೆ ಮತ್ತು ಬಾಬು ವಾಲಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page