
Vijayapura: ಮುಸ್ಲಿಂ (Muslim) ಗುತ್ತಿಗೆದಾರರಿಗೆ ಶೇ.4 ಮೀಸಲಾತಿ ನೀಡುವ ತಿದ್ದುಪಡಿಯ ಬಗ್ಗೆ ರಾಜ್ಯಪಾಲರಿಗೆ ಒಪ್ಪಿಗೆ ನೀಡಬಾರದೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (MLA Basanagouda Patil Yatnal) ಪತ್ರ ಬರೆದಿದ್ದಾರೆ.
ರಾಜ್ಯಪಾಲ ಥಾವರ್ಚಂದ ಗೆಹ್ಲೋಟ್ ಅವರಿಗೆ ಈ ತಿದ್ದುಪಡಿಯ ವಿರೋಧ ವ್ಯಕ್ತಪಡಿಸಿ, ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಮಂಗಳವಾರ, ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025 ಅನ್ನು ಮಂಡಿಸಿದ್ದರು.
ಈ ವಿಧೇಯಕ ಮಂಡನೆಯಾದ ತಕ್ಷಣವೇ, ಶಾಸಕ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆಯುತ್ತಾ, ಸಂವಿಧಾನಬಾಹಿರವಾಗಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ತಿದ್ದುಪಡಿ ಸರಿಯಲ್ಲ ಎಂದು ವಿರೋಧಿಸಿದ್ದಾರೆ.