Yelahanka, Bengaluru : ಯಲಹಂಕ ವಿಧಾನಸಭಾ ಕ್ಷೇತ್ರದ ಅಟ್ಟೂರು ವಾರ್ಡ್ ವ್ಯಾಪ್ತಿಯ ಅನಂತಪುರ, AMS Layout ವ್ಯಾಪ್ತಿಯಲ್ಲಿ ರಸ್ತೆಗಳ ಪುನರ್ ನಿರ್ಮಾಣ ಕಾಮಗಾರಿಯನ್ನು BBMP ಮುಖ್ಯ ಆಯುಕ್ತ ಗೌರವ್ ಗುಪ್ತ ಬುಧವಾರ ಪರಿಶೀಲಿಸಿದರು.
‘110 ಹಳ್ಳಿ ಯೋಜನೆ’ಯಡಿ ಕುಡಿಯುವ ನೀರು ಸರಬರಾಜು ಕೊಳವೆ ಮತ್ತು ಒಳಚರಂಡಿ ಮಾರ್ಗದ ಕಾಮಗಾರಿಯನ್ನು ಜಲಮಂಡಳಿ ಪೂರ್ಣಗೊಳಿಸಿರುವ ಕಡೆ ರಸ್ತೆ ದುರಸ್ತಿ ಯನ್ನು ಕೂಡಲೇ ನಡೆಸಬೇಕು. ಪಾದಚಾರಿ ಮಾರ್ಗವನ್ನೂ ಅಭಿವೃದ್ಧಿಪಡಿಸಬೇಕು. ಕಾಮಗಾರಿ ವೇಳೆ ಸ್ಥಳೀಯರಿಗೆ ಯಾವುದೇ ಸಮಸ್ಯೆ ಆಗ ದಂತೆ ನೋಡಿಕೊಳ್ಳಬೇಕು’ ಎಂದು ಆಯುಕ್ತರು ತಿಳಿಸಿದರು.
ಈ ವೇಳೆ ಆಯುಕ್ತರ ಜೊತೆ ಯಲಹಂಕ ವಲಯದ ಜಂಟಿ ಆಯುಕ್ತರಾದ ಪೂರ್ಣಿಮಾ, ಮುಖ್ಯ ಎಂಜಿನಿಯರ್ ರಂಗನಾಥ್, ಕಾರ್ಯಪಾಲಕ ಎಂಜಿನಿಯರ್ ಸುಧಾಕರ ರೆಡ್ಡಿ ಉಪಸ್ಥಿತರಿದ್ದರು.