New Delhi: ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧಂಕರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ (Sushil Kumar) ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಅವರು ಒಂದು ವಾರದೊಳಗೆ ಶರಣಾಗಬೇಕೆಂದು ಸೂಚಿಸಲಾಗಿದೆ.
2021ರಲ್ಲಿ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಕರ್ ಮೇಲೆ ಹಲ್ಲೆ ನಡೆದಿದ್ದು, ನಂತರ ಅವರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಸುಶೀಲ್ ಕುಮಾರ್ ಬಂಧಿತರಾಗಿದ್ದರು. ಮೂರೂವರೆ ವರ್ಷ ಬಂಧನದಲ್ಲಿದ್ದ ನಂತರ ಈ ವರ್ಷ ಮಾರ್ಚ್‌ನಲ್ಲಿ ಅವರಿಗೆ ಜಾಮೀನು ಸಿಕ್ಕಿತ್ತು.
ಸಾಗರ್ ಅವರ ತಂದೆ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಶೀಲ್ ಕುಮಾರ್ ಹೊರಗಿದ್ದಾಗ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ.
ಆಸ್ತಿ ವಿವಾದದಿಂದ ನಡೆದ ಈ ಹಲ್ಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚು ಮತ್ತು 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.